Sunday, August 23, 2026

BDA Apartments

Home Front Page ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ.

ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ.

ಬೆಂಗಳೂರು,ಜನವರಿ,29,2024(www.justkannada.in): ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು.

Key words: 2 lakh –compensation- each – four students – died – accident-CM-Siddaramaiah