ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಬಲಿ.

0
1

ಬೆಂಗಳೂರು,ಏಪ್ರಿಲ್,18,2023(www.justkannada.in):  ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹನುಮಾನ್ ಮತ್ತು ಹಂಸ ದಂಪತಿಯ ಮಗು   2 ವರ್ಷದ ಕಾರ್ತಿಕ್ ಸಾವನ್ನಪ್ಪಿರುವ ಮಗು. ಕಾಮಗಾರಿಗೆ ತೆಗೆದಿದ್ದ ಗುಂಡಿಯನ್ನ ಮುಚ್ಚಿರಲಿಲ್ಲ. ಜಲಮಂಡಳಿ ಅಧಿಕಾರಿಗಳ  ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ.

ಜಲಮಂಡಳಿ ಇಂಜಿನಿಯರ್  ಮತ್ತು ಕಾಂಟ್ರ್ಯಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: 2-year-old child -fell – died-bangalore