ಬಸ್ ದುರಂತದಲ್ಲಿ 20 ಮಂದಿ ಸಾವು, 27 ಮಂದಿ ಪಾರು- ಆಂಧ್ರ ಗೃಹಸಚಿವೆ ಮಾಹಿತಿ

ಆಂಧ್ರಪ್ರದೇಶ,ಅಕ್ಟೋಬರ್,24,2025 (www.justkannada.in): ಕರ್ನೂಲ್ ನಲ್ಲಿ ಖಾಸಗಿ  ಬಸ್ ಬೆಂಕಿಹೊತ್ತಿ ಉರಿದು ಸಂಭವಿಸಿದ ದುರಂತದಲ್ಲಿ 20 ಮಂದಿ ಸಾವನ್ನಪ್ಪಿ, 27 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಅವರು ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ, ಆಂಧ್ರಪ್ರದೇಶದ ಕರ್ನೂಲ್ ಬಳಿ  ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ. ಬೈಕ್ ಗೆ ಬಸ್  ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 20 ಪ್ರಯಾಣಿಕರು ಸಜೀವದಹನರಾಗಿದ್ದಾರೆ. . ಬೈಕ್ ಸವಾರ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೆಲವರ ಶವಗಳು ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಹೀಗಾಗಿ ಡಿಎನ್‌ಎ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ  ಎಂದು ತಿಳಿಸಿದರು.

ಈ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಸದ್ಯ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು  ವಂಗಲಪುಡಿ ಅನಿತಾ ತಿಳಿಸಿದ್ದಾರೆ.

ಇನ್ನು ತೆಲಂಗಾಣ ಸರ್ಕಾರ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 20 people, died, bus accident, Andhra, Home Minister