Sunday, October 25, 2026

Dasara Wishes

Happy Dasara
Home Front Page ರಾಜ್ಯದಲ್ಲಿ ಮಳೆಗೆ 21 ಬಲಿ: 40ಕ್ಕೂ ಹೆಚ್ಚು ಜಾನುವಾರುಗಳು ಸಾವು- ಸಚಿವ ಕೃಷ್ಣಬೈರೇಗೌಡ ಮಾಹಿತಿ.

ರಾಜ್ಯದಲ್ಲಿ ಮಳೆಗೆ 21 ಬಲಿ: 40ಕ್ಕೂ ಹೆಚ್ಚು ಜಾನುವಾರುಗಳು ಸಾವು- ಸಚಿವ ಕೃಷ್ಣಬೈರೇಗೌಡ ಮಾಹಿತಿ.

ಕಾರವಾರ,ಜುಲೈ,8,2023(www.justkannada.in): ರಾಜ್ಯದಲ್ಲಿ  ಮಳೆಗೆ 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು.

ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡುತ್ತೇವೆ ಎಂದರು.

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

Key words: 21 death- rain – state- Minister -Krishnabairegowda