ಗೃಹಜ್ಯೋತಿ ಯೋಜನೆಗೆ ಕಳೆದ 3 ತಿಂಗಳ ಅವಧಿಯಲ್ಲಿ 2,152 ಕೋಟಿ ರೂ. ಅನುದಾನ ಬಿಡುಗಡೆ.

ಬೆಂಗಳೂರು,ನವೆಂಬರ್,20,2023(www.justkannada.in): ರಾಜ್ಯಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಗೆ ಕಳೆದ 3 ತಿಂಗಳ ಅವಧಿಯಲ್ಲಿ 2,152 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ. ಈ ಯೋಜನೆಯಡಿ ರಾಜ್ಯದ ಒಟ್ಟು 1.56 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯುನಿಟ್  ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ವರೆಗೆ ಯೋಜನೆಗಾಗಿ ರೂ. 2,152 ಕೋಟಿ ಅನುದಾನವನ್ನು ನಮ್ಮ‌ ಸರ್ಕಾರವು ಬಿಡುಗಡೆಗೊಳಿಸಿದೆ  ಎಂದು ತಿಳಿಸಿದ್ದಾರೆ.

ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Key words: 2,152 crores – last 3 months -Griha Jyothi Yojana- Grant release.