ದೇಶದಲ್ಲಿ ಒಂದೇ ದಿನ 24,712 ಮಂದಿಗೆ ಕೊರೋನಾ ಸೋಂಕು ಪತ್ತೆ…

ನವದೆಹಲಿ,ಡಿಸೆಂಬರ್,24,2020(www.justkannada.in) ದೇಶದಲ್ಲಿಉ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದರೇ ಇನ್ನೊಂದೆಡೆ ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವ ಕೊರೋನಾ ರೂಪಾಂತರ ಮತ್ತಷ್ಟು ಆತಂಕ ಉಂಟು ಮಾಡಿದೆ. ಹೀಗಾಗಿ ವಿದೇಶದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದ್ದು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ.Teachers,solve,problems,Government,bound,Minister,R.Ashok

ಇನ್ನು ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  1,01,23,778 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 24,712 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ  1,01,23,778ಕ್ಕೆ ಏರಿಕೆಯಾಗಿದೆ.24712-people-coronavirus-single-day-country

 ಒಂದೇ ದಿನ ಕೊರೊನಾ ಮಹಮಾರಿಗೆ ದೇಶದಲ್ಲಿ 312 ಜನರು ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,756 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 96, 93,173 ಸೋಂಕಿತರು ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 2,83,849 ಸಕ್ರಿಯ ಪ್ರಕರಣಗಳಿವೆ.

Key words: 24,712 people -coronavirus – single day-country