ಶೇ.25ರಷ್ಟೂ ಕೆಲಸವಾಗಿಲ್ಲ : ಅಧಿಕಾರಿಗಳ ಬೆವರಿಳಿಸಿದ ಸಚಿವ ನಾರಾಯಣಗೌಡ

ಬೆಂಗಳೂರು,ಫೆಬ್ರವರಿ,23,2021(www.justkannada.in) : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ತೀರಾ ಕಳಪೆ ಸಾಧನೆ ಮಾಡಿರುವುದನ್ನ ನೋಡಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳ ವಿರುದ್ದ ಕೆಂಡಾಮಂಡಲವಾದರು.

jk

ವಿಕಾಸ ಸೌಧದಲ್ಲಿ ಇಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಸಚಿವರು ಕಿಡಿಕಾರಿದರು.

ಪಿ.ಡಿ.ಖಾತೆಯಲ್ಲಿ ಸುಮಾರು 880 ಕೋಟಿ ರೂ. ಅನುದಾನ ಕೊಳೆಯುತ್ತಿದೆ

ಎರಡು ವರ್ಷಕ್ಕಿಂತ ಮೇಲ್ಪಟ್ಟ ಕಾಮಗಾರಿಗಳಿಗೆ ಬಿಡುಗಡೆಯಾಗಿರುವ 433 ಕೋಟಿ ರೂ. ಸೇರಿ ಪ್ರಸಕ್ತ ಸಾಲಿನಲ್ಲಿ 447 ಕೋಟಿ ರೂ. ನೀಡಿದ್ದು, ಜಿಲ್ಲಾಧಿಕಾಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 880 ಕೋಟಿ ರೂ. ಅನುದಾನ ಕೊಳೆಯುತ್ತಿದೆ. ಇಷ್ಟೊಂದು ಅನುದಾನ ಇದ್ದರೂ ಶೇ. 25ರಷ್ಟೂ ಪ್ರಗತಿಯಾಗಿಲ್ಲ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.

ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜನಪ್ರತಿನಿಧಿಗಳಾಗಿ ನಾವು ತಲೆ ತಗ್ಗಿಸಬೇಕಾಗಿದೆ

ಜನಸಾಮಾನ್ಯರ ಅನುಕೂಲಕ್ಕಾಗಿ ಬಳಕೆಯಾಗಬೇಕಾದ ಅನುದಾನವನ್ನು ಬಳಸಿಲ್ಲ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲಾಖೆಯಡಿ ಹಣ ಬಿಡುಗಡೆ ಮಾಡಲಾಗಿತ್ತು. ಪ್ರಮುಖವಾಗಿ ಶಾಲಾ ಕಾಲೇಜುಗಳ ಕಟ್ಟಡ, ಹಳ್ಳಿಗಳ್ಳಿ ಆರ್.ಓ. ಮಾದರಿಯ ಕುಡಿಯುವ ನೀರಿನ ಸೌಲಭ್ಯ, ಆರೋಗ್ಯಕ್ಕಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಜನಸಾಮಾನ್ಯರ ಅಗತ್ಯಕ್ಕೆ ಅನುಗುಣವಾಗಿ ಅನುದಾನ ಬಳಕೆಯಾಗಬೇಕಿತ್ತು. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಜನಪ್ರತಿನಿಧಿಗಳಾಗಿ ನಾವು ತಲೆ ತಗ್ಗಿಸಬೇಕಾಗಿದೆ ಎಂದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

ಕೊಟ್ಟ ಅನುದಾನವನ್ನೂ ಬಳಸದೆ ಏನು ಮಾಡುತ್ತಿದ್ದೀರಿ

ಕೊಟ್ಟ ಅನುದಾನವನ್ನೂ ಬಳಸದೆ ಏನು ಮಾಡುತ್ತಿದ್ದೀರಿ. ಹೀಗೆ, ಮಾಡಿದರೆ ಪ್ರಗತಿ ಹೇಗೆ ಸಾಧ್ಯ. ಕೊರೊನಾ ಸಂದರ್ಭದಲ್ಲಿ, ಆರ್ಥಿಕ ಸಮಸ್ಯೆ ಇದ್ದರೂ ಅಭಿವೃದ್ಧಿ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಎಲ್ಲ ಶಾಸಕರಿಗೆ ತಲಾ 1.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಆದಾಗ್ಯೂ ಇರುವ ಅನುದಾನವನ್ನೇ ಬಳಸದೆ ಮತ್ತೆ ಅನುದಾನ ಬೇಕು ಎಂದು ಪ್ರಸ್ತಾವನೆ ನೀಡಿದ್ದೀರಿ ಎಂದು ಆಕ್ರೋಶವ್ಯಕ್ತಪಡಿಸಿದರು.

ಕಡಿಮೆ ಪ್ರಗತಿ ಸಾಧಿಸಿದ ಜಿಲ್ಲಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ನೀಡುವಂತೆ

ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಹಣ ಇಟ್ಟು ಕೊಳೆಸುವುದಕ್ಕೆ ಹೆಚ್ಚಿನ ಅನುದಾನ ಬೇಕಾ ನಿಮಗೆ. ಮೊದಲು ನೀಡಿದ ಅನುದಾನವನ್ನ ಯಾಕೆ ಬಳಸಿಲ್ಲ ಎಂದು ಸ್ಪಷ್ಟನೆ ನೀಡಿ. ಅಲ್ಲದೆ ಕಡಿಮೆ ಪ್ರಗತಿ ಸಾಧಿಸಿರುವ ಜಿಲ್ಲಾಧಿಕಾರಿಗಳಿಗೆ, ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಎಂದು ಸಚಿವರು ಸೂಚಿಸಿದ್ದಾರೆ.

ಬೆಂ.ಗ್ರಾಮಾಂತರ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳು ಶೇ50ರಷ್ಟು  ಪ್ರಗತಿ ಸಾಧಿಸಿಲ್ಲ

25%-not working-OFFICERS-Sweated-Minister-Narayana Gowda

2021ರ ಜನೆವರಿ ಅಂತ್ಯಕ್ಕೆ ಬೆಂಗಳೂರು ಗ್ರಾಮಾಂತರ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಬಿಟ್ಟರೆ ಉಳಿದ ಯಾವ ಜಿಲ್ಲೆಯೂ ಶೇ50ರಷ್ಟು ಕಾಮಗಾರಿ ಪ್ರಗತಿ ಸಾಧಿಸಿಲ್ಲ. ಯಾವ ಪುರುಷಾರ್ಥಕ್ಕೆ ಪ್ರಗತಿ ಪರಿಶೀಲನೆ ಮಾಡಬೇಕು. ಬಾಗಲಕೋಟೆ, ಹಾವೇರಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಚಿತ್ರದುರ್ಗ, ಬಳ್ಳರಿ, ಯಾದಗಿರಿ, ಕೋಲಾರ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಕೊಪ್ಪಳ, ಕಲಬುರಗಿ, ರಾಮನಗರ, ಗದಗ, ಮೈಸೂರು, ಉತ್ತರ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರಗತಿ ಶೇ..30 ರಷ್ಟನ್ನು ಸಹ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಕಡಿಮೆ ಪ್ರಗತಿ ಸಾಧಿಸಿದ್ದರೂ, ಜಿಲ್ಲಾಧಿಕಾರಿಗಳು ಶಾಸಕರನ್ನು ಸಂಪರ್ಕಿಸಿಲ್ಲ

2021ರ ಜನೆವರಿ ಅಂತ್ಯದವರೆಗೆ ಎಲ್ಲ ಜಿಲ್ಲೆಗಳಿಂದ ಒಟ್ಟು  1127.60 ಕೋಟಿ ರೂ. ಪಿ.ಡಿ. ಖಾತೆಯಲ್ಲಿತ್ತು. ಇನ್ನೂ 851. 28 ಕೋಟಿ ರೂ. ಹಣ ಬಳಕೆಯಾಗದೆ ಉಳಿದಿದೆ. ಇಡಿ ರಾಜ್ಯದಲ್ಲಿ ಆಗಿರುವ ಪ್ರಗತಿ ಕೇವಲ ಶೇ. 25 ರಷ್ಟು ಮಾತ್ರ. ಕಡಿಮೆ ಪ್ರಗತಿ ಸಾಧಿಸಿದ್ದರೂ, ಜಿಲ್ಲಾಧಿಕಾರಿಗಳು ಶಾಸಕರನ್ನು ಸಂಪರ್ಕಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಇಲಾಖೆ ಅಧಿಕಾರಿಗಳು, ಎಲ್ಲಾ ಜಿಲ್ಲಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

key words : 25%-not working-OFFICERS-Sweated-Minister-Narayana Gowda