ರಾಜ್ಯದಲ್ಲಿ ಇಂದು ಹೊಸದಾಗಿ 2,523 ಕೊರೋನಾ ಪ್ರಕರಣಗಳು ಪತ್ತೆ…

ಬೆಂಗಳೂರು,ಮಾರ್ಚ್,25,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಭೀತಿ ಎದುರಾಗಿದ್ದು ಈ ನಡುವೆ ಇಂದು ರಾಜ್ಯದಲ್ಲಿ ಇಂದು ಹೊಸದಾಗಿ 2,523 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.jk

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹೊಸದಾಗಿ 2,523 ಕೊರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 9,78,478 ಕ್ಕೆ ಏರಿಕೆಯಾಗಿದೆ. ಇಂದು ಕೊರೋನಾಗೆ 10 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.2,523 corona case- discovered - state -today.

ಇನ್ನು ಇದುವರೆಗೆ 12,471 ಮಂದಿ ಕೊರೋನಾಗೆ ಬಲಿಯಾಗಿದ್ದು, 9,47,781 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18207 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 1623 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

Key words: 2,523 corona case- discovered – state -today.