ಉತ್ತರ ಪ್ರದೇಶದಲ್ಲಿ ಕಾಲ್ತುಳಿತಕ್ಕೆ 27 ಮಂದಿ ಸಾವು

ಉತ್ತರ ಪ್ರದೇಶ,ಜುಲೈ,2,2024 (www.justkannada.in): ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದ 27 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ  ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ರತಿಭನಪುರದಲ್ಲಿ ಬೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಉಂಟಾಗಿ ಮೂವರು ಮಕ್ಕಳು ಸೇರಿ 27 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಾಲ್ತುಳಿತದಿಂದ ಸಾವನ್ನಪ್ಪಿದ್ದು ಮಾತ್ರವಲ್ಲದೆ, ಹಲವು ಮಂದಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Key words: 27 death, stampede, program, Uttar Pradesh