ರಾಜ್ಯದಲ್ಲಿ ಶೇ 28ರಷ್ಟು ಮಳೆ ಕೊರತೆ: 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ- ಕಂದಾಯ ಸಚಿವ ಕೃಷ್ಣಭೈರೇಗೌಡ.

ಬೆಂಗಳೂರು,ಅಕ್ಟೋಬರ್,5,2023(www.justkannada.in): ರಾಜ್ಯದಲ್ಲಿ ಶೇ 28ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ಬಳಿ 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದು  ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದಿನಿಂದ ಮೂರು ದಿನಗಳ ಕಾಲ 11 ಜಿಲ್ಲೆಗಳಲ್ಲಿ ಕೇಂದ್ರದ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಬರ ಅಧ್ಯಯನ ತಂಡದ ಜೊತೆ ಸಿಎಂ ಸಿದ‍್ಧರಾಮಯ್ಯ ಸಭೆ ನಡೆಸುತ್ತಿದ್ದು  ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ಸಂಕ್ಷಿಪ್ತ ಮಾಹಿತಿ  ನೀಡಿದ್ದಾರೆ.
ಈ ಕುರಿತು ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ,  ಕರ್ನಾಟಕದಲ್ಲಿ ಶೇ 28ರಷ್ಟು ಮಳೆ ಕೊರತೆಯಾಗಿದೆ. ಕೇಂದ್ರ ಕೇಳಿದ ಎಲ್ಲಾ ಅಂಕಿ ಅಂಶ ಕೊಟ್ಟಿದ್ದೇವೆ. ವರದಿ ಬಗ್ಗೆ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಕೇಂದ್ರದ ಬಳಿ 4800 ಕೋಟಿ ರೂ. ಪರಿಹಾರ ಕೇಳಿದ್ದೇವೆ.  ಮಾರ್ಗಸೂಚಿ ಪ್ರಕಾರ  ಅಷ್ಟೇ ಪರಿಹಾರ ಕೇಳಲು ಆಗುವುದು.  ನಮಗಿಂತ ಬೇರೆ ರಾಜ್ಯಗಳಲ್ಲಿ ಅಧಿಕ ಮಳೆ ಕೊರತೆ ಆಗಿದೆ. ಆದರೆ ನಾವು ಬರಪೀಡಿತ  ತಾಲ್ಲೂಕನ್ನ ಘೋಷಣೆ ಮಾಡಿದ್ದೇವೆ. ಕೇಂದ್ರ ನಮ್ಮ ಮನವಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದು ಹೇಳಿದರು.

Key words: 28%- rain deficit – state- Rs 4800 -crore – Revenue Minister- Krishnabhairegowda.