ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ: ಫೆ.21 ರಂದು ಬೃಹತ್ ಸಮಾವೇಶ…

ತುಮಕೂರು,ಫೆಬ್ರವರಿ13,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ  ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು ಫೆಬ್ರವರಿ 21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.jk

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 21 ರಂದು ಬೃಹತ್ ಸಮಾವೇಶ ನಡೆಸಲಿದ್ದೇವೆ. ಸಮಾವೇಶಕ್ಕೆ 10 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.2A reservation -fight - Panchamasali community-Mass conference - Feb. 21.

ವಚನಾನಂದ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ್, ಶಾಸಕ ಜ್ಯೋತಿ ಗಣೇಶ್ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Key words:  2A reservation -fight – Panchamasali community-Mass conference – Feb. 21.