ಜುಲೈ 8ಕ್ಕೆ ಪಿಯುಸಿ ಫಲಿತಾಂಶ…

ಮೈಸೂರು,ಮೇ,29,2020(www.justkannada.in): ಜುಲೈ 8ರಂದು ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್,  ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ.  ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ಎಸ್​ಎಲ್​ಸಿ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಜುಲೈ ಅಂತ್ಯದಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

Key words: 2nd  PUC- Result – July- 8th.