ಮೀನುಗಾರಿಕೆ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಯೋಜನೆ: ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್.

ಬೆಂಗಳೂರು,ಫೆಬ್ರವರಿ,16,2024(www.justkannada.in): ಮೀನುಗಾರಿಕೆ ಕ್ಷೇತ್ರಕ್ಕೆ 3 ಸಾವಿರ ಕೋಟಿ ರೂ. ಯೋಜನೆ ಘೋಷಣೆ ಮಾಡಲಾಗಿದ್ದು, ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಾ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಹೇಳಿದರು.

ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು.

ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

Key words: 3 thousand- crores – fisheries sector-Project- Marine Ambulance-budget