ಇಂದಿನಿಂದಲೇ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ

ಬೆಂಗಳೂರು, ಅಕ್ಟೋಬರ್ 01, 2023 (www.justkannada.in): ಇಂದಿನಿಂದಲೇ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ.

ಇಂದಿನಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿಯಾಗಲಿದ್ದು, ಹಳೇ ದರಗಳಲ್ಲಿ ನಡೆಯುತ್ತಿದ್ದ ನೋಂದಣಿ ಪ್ರಕ್ರಿಯೆ ಸ್ಥಗಿತವಾಗಿದೆ.

ಪ್ರತಿ ವರ್ಷ ಆಸ್ತಿ ನೊಂದಣಿ ಮಾರ್ಗಸೂಚಿ ಪರಿಷ್ಕರಣೆ ಮಾಡಬೇಕೆಂದು ಕಂದಾಯ ಇಲಾಖೆಯಲ್ಲಿ ನಿಯಮವಿದೆ ಆದರೆ, ಹಲವು ವರ್ಷಗಳಿಂದ ದರ ಏರಿಕೆ ಮಾಡಿರಲಿಲ್ಲ. ಹಾಗಾಗಿ ಅ.1 ರಿಂದ ಮಾರ್ಗಸೂಚಿ ದರ ಹೆಚ್ಚಳ ಮಾಡಲಾಗಿದೆ.

ರಾಜ್ಯದಲ್ಲಿ ಎಲ್ಲಾ ಕಡೆ ಮಾರ್ಗಸೂಚಿ ದರ ಏರಿಕೆ ಆಗಲ್ಲ. ಕೆಲವು ಕಡೆ ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರ ಹೆಚ್ಚಳ ಇದ್ದರೆ, ಅಂತಹ ಪ್ರದೇಶಗಳಲ್ಲಿ ದರ ಹೆಚ್ಚಳವಾಗುವುದಿಲ್ಲ ಎಂದು ಇತ್ತೀಚಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು.