ದೇಶದಲ್ಲಿ 30 ಲಕ್ಷ ಹುದ್ದೆ ಖಾಲಿ: ‘ಕೈ’ ಅಧಿಕಾರಕ್ಕೆ ಬಂದ ತಕ್ಷಣವೇ ಭರ್ತಿ- ರಾಹುಲ್ ಗಾಂಧಿ.

ನವದೆಹಲಿ,ಏಪ್ರಿಲ್,8,2024 (www.justkannada.in): ದೇಶದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ಖಾಲಿ ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ ಎಂದು ಸಂಸದ ರಾಹುಲ್ ಗಾಂಧಿ ಭರವಸೆ ನೀಡಿದರು.

 ಮಧ್ಯಪ್ರದೇಶದ ಮಂಡ್ಲಾದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿಯಿದೆ.  ಆದರೆ ಕೇಂದ್ರ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡಿಲ್ಲ. ನಾವು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವುದಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು.

Key words: 30 lakh, vacancies, congress, Rahul Gandhi