ಬೆಂಗಳೂರಿನಲ್ಲಿ ಪ್ರತಿನಿತ್ಯ 30 ಸಾವಿರ ಕೊರೋನಾ ಟೆಸ್ಟ್: ಸಾವಿನ ಸಂಖ್ಯೆಯಲ್ಲಿ ಕಡಿಮೆ- ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು,ಸೆಪ್ಟಂಬರ್ 2,2020(www.justkannada.in):  ಬೆಂಗಳೂರಿನಲ್ಲಿ ಪ್ರತಿನಿತ್ಯ 30 ಸಾವಿರ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಹಾಗಯೇ ಬೆಂಗಳೂರಿನಲ್ಲಿ ಕೊರೋನಾದಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.jk-logo-justkannada-logo

ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್,  ನಿನ್ನೆ ಒಂದೇ ದಿನ 20 ಸಾವಿರ ಕೊರೋನಾ ಟೆಸ್ಟ್ ಮಾಡಲಾಗಿದೆ ಇದರಲ್ಲಿ ಶೇ. 10 ರಷ್ಟು ಜನರಿಗೆ ಸೋಂಕು ಪತ್ತೆಯಾಗಿದೆ. ಕೊರೋನಾ ಟೆಸ್ಟ್ ಸಂಖ್ಯೆಯನ್ನ 30 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಜನರಲ್ಲಿ ಆತಂಕ ಬೇಡ. ಸೋಂಕಿತರನ್ನು ಐಸೋಲೇಷನ್ ಗೆ ಮಾಡಲಾಗುತ್ತಿದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.30-thousand-corona-test-bangalore-bbmp-commissioner-manjunath-prasad

ಇನ್ನು ಕೊರೋನಾ ಸೋಂಕಿತರ ಮನೆಗೆ ಪೋಸ್ಟ್ ಹಾಕಲಾಗುತ್ತಿತ್ತು. ಆದರೆ ಇದೀಗ ಇನ್ಮುಂದೆ ಪೋಸ್ಟರ್ ಹಾಕಲ್ಲ. ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡುತ್ತೇವೆ. ಈ ಬಗ್ಗೆ ಸಿಎಂ ಜತೆ ಚರ್ಚಿಸಲಾಗುತ್ತದೆ ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.

Key words: 30 Thousand -Corona Test – Bangalore- BBMP Commissioner -Manjunath Prasad