ಬ್ರಾಂಡ್ ಬೆಂಗಳೂರು ಅಭಿಯಾನಕ್ಕೆ ಬರೋಬ್ಬರಿ 30 ಸಾವಿರ ಸಲಹೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬ್ರಾಂಡ್ ಬೆಂಗಳೂರು ಅಭಿಯಾನಕ್ಕೆ 30,000 ಸಲಹೆಗಳು ಬಂದಿವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಬ್ರಾಂಡ್ ಬೆಂಗಳೂರು ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಸಾವಿರಾರು ಸಲಹೆಗಳು ಹರಿದು ಬರುತ್ತಿವೆ. ಈವರೆಗೆ 30,000 ಸಲಹೆಗಳು ಬಂದಿವೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಅಭಿವೃದ್ಧಿಗಾಗಿ ನಡೆಸುತ್ತಿರುವ ಬ್ರಾಂಡ್ ಬೆಂಗಳೂರು ಅಭಿಯಾನದ ಭಾಗವಾಗಿ ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಶನಿವಾರ ವಿಧಾನಸೌಧದಲ್ಲಿ ಸಂವಾದ ನಡೆಸಲಾಗಿದೆ.

ಎಲ್ಲರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಟ್ರಾಫಿಕ್ ನಿರ್ವಹಣೆ, ಮೂಲಸೌಕರ್ಯ ಮತ್ತು ಪ್ರವಾಹವನ್ನು ಹೇಗೆ ತಡೆಯುವುದು ಮತ್ತು ಇತರ ವಿಷಯಗಳ ಕುರಿತು ನಾವು ನಾಗರಿಕರಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ ಎಂದು ಡಿಸಿಎಂ ಕೆಡಿಶಿ ತಿಳಿಸಿದ್ದಾರೆ.