Tuesday, September 29, 2026

BDA Apartments

ದೇಶದಲ್ಲಿ ಒಂದೇ ದಿನ 30,570 ಕೋವಿಡ್ ಪ್ರಕರಣಗಳು ಪತ್ತೆ BDA JK_Adv BDA Adv
Home Front Page ದೇಶದಲ್ಲಿ ಒಂದೇ ದಿನ 30,570 ಕೋವಿಡ್ ಪ್ರಕರಣಗಳು ಪತ್ತೆ.

ದೇಶದಲ್ಲಿ ಒಂದೇ ದಿನ 30,570 ಕೋವಿಡ್ ಪ್ರಕರಣಗಳು ಪತ್ತೆ.

ನವದೆಹಲಿ,ಸೆಪ್ಟಂಬರ್,16,2021(www.justkannada.in): ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರಿಳಿತ ಮುಂದುವರೆದಿದ್ದು ಇದೀಗ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ  ಹೊಸದಾಗಿ 30,570 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 431 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೊರೋನಾಗೆ ಮೃತಪಟ್ಟವರ ಸಂಖ್ಯೆ 443928 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 342923 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 32560474 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ಹಾಗೆಯೇ ದೇಶದಲ್ಲಿ ಈವರೆಗೆ ಒಟ್ಟು 76,57,17,137 ಜನರಿಗೆ  ಕೋವಿಡ್ ಲಸಿಕೆ ನೀಡಲಾಗಿದೆ.

Key words: 30,570 cases –Covid-detected – single day – country.