Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ 31 ಶಾಸಕರು

ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ 31 ಶಾಸಕರು

ಬೆಂಗಳೂರು,ಫೆಬ್ರವರಿ,23,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ವಿಚಾರ ಚರ್ಚೆಯಲ್ಲಿರುವಾಗಲೇ ಇದೀಗ 31 ಕಾಂಗ್ರೆಸ್ ಶಾಸಕರು ತಮ್ಮ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸಚಿವ ಸಂಪುಟ ಪುನರಚನೆ ಮಾಡಿ ಇದರಲ್ಲಿ ಮೊದಲ ಬಾರಿ ಆಯ್ಕೆಯಾಗಿರುವ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಿ ಎಂದು ಆಗ್ರಹಿಸಿ ಹೈಕಮಾಂಡ್ ಗೆ 31 ಶಾಸಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ, ಇಕ್ಬಾಲ್ ಹುಸೇನ್ , ಅಶೋಕ್ ಕುಮಾರ್ ರೈ, ಪ್ರದೀಪ್ ಈಶ್ವರ್, ಶಿವಗಂಗ ಬಸವರಾಜು, ಎನ್.ಟಿ ಶ್ರೀನಿವಾಸ್, ದರ್ಶನ್ ಧ್ರುವನಾರಾಯಣ್ ಸೇರಿ 31 ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ನಿಂದ ಮೊದಲ ಬಾರಿಗೆ 38  ಶಾಸಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಯುವಕರ ಅವಶ್ಯಕತೆ ಇದೆ ಎಂದು ಜನ ಹೇಳಿದ್ದಾರೆ. ಮೊದಲ ಬಾರಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ ಜನಾದೇಶಕ್ಕೆ ಮನ್ನಣೆ ನೀಡಿ. ಯುವಕರಿಗೆ ಅವಕಾಶ ನೀಡಿವುದು ಈ ಕ್ಷಣದ ಬೇಡಿಕೆಯಾಗಿದೆ. ಮೊದಲ ಬಾರಿ ಆಯ್ಕೆಯಾದ ಐವರಿಗೆ ಸಚಿವ ಸ್ಥಾನ ನೀಡಿ ಸಂಪುಟ ಪುನಾರಚನೆ ಮಾಡಿ ತಮಗೂ ಅವಕಾಶ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Key words: 31 MLAs, letter, Congress, High Command