ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ದೃಢ ಹೆಜ್ಜೆ- ಸಚಿವ ಜಗದೀಶ್ ಶೆಟ್ಟರ್…

ಬೆಂಗಳೂರು ಆಗಸ್ಟ್‌ 28,2020(www.justkannada.in):  ಕೋಲಾರದ ‘ಭಾರತ್ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌'(ಬಿಜಿಎಂಎಲ್‌)ನಲ್ಲಿ ಬಳಕೆ ಆಗದೇ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಡುವಂತೆ ರಾಜ್ಯ ಮಾಡಿರುವ ಮನವಿಗೆ ಕೇಂದ್ರ ಸ್ಪಂದಿಸಿದ್ದು, ಇದರಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣ ಉದ್ದಿಮೆ ಸ್ಥಾಪಿಸಲು ಸಾಧ್ಯವಾಗಲಿದೆ ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಕೈಗಾರಿಕಾ ಅಭಿವೃದ್ಧಿಯ ಒಂದು ವರ್ಷದ ಸಾಧನೆಗಳ ಕುರಿತು ಪುಸ್ತಕವನ್ನು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅನಾವರಣಗೊಳಿಸಿದ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಸಚಿವ ಜಗದೀಶ ಶೆಟ್ಟರ್‌, “ಬಿಜಿಎಂಎಲ್‌ನಲ್ಲಿ ಬಳಕೆ ಆಗದೇ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಡುವಂತೆ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಗಣಿ,ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಶಿ ಅವರ ಬಳಿ ಮನವಿ ಮಾಡಲಾಗಿದೆ,”ಎಂದರು.3200-acres-land-transfer-bgml-industrial-park-minister-jagdish-shetter

ಗಣಿ ಮತ್ತು ಕಲ್ಲಿದ್ದಲು ಇಲಾಖೆ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ, ಅಲ್ಲಿ ಯಾವುದೇ ನೈಸರ್ಗಿಕ ಸಂಪನ್ಮೂಲ ಇಲ್ಲದಿರುವುದು ಖಾತರಿಯಾದ 6 ತಿಂಗಳ ನಂತರ ಅಗತ್ಯ ಅನಮೋದನೆಗಳೊಂದಿಗೆ ಕರ್ನಾಟಕ ಕೈಗಾರಿಕಾ ಅಭಿವೃದ್ದಿ ಮಂಡಳಿಗೆ ಗಣಿ ಇಲಾಖೆ ಭೂಮಿ ಹಸ್ತಾಂತರಿಸುವ ನಿರೀಕ್ಷೆ ಇದೆ,” ಎಂದು ಅವರು ಹೇಳಿದರು.

ಉದ್ದೇಶಿತ ಕೈಗಾರಿಕಾ ಪಾರ್ಕ್‌ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 90 ಕಿ.ಮೀ. ಚೆನ್ನೈ ಬಂದರಿನಿಂದ 260 ಕಿ.ಮೀ. ಕೃಷ್ಣಪಟ್ಟಣಂ ಬಂದರಿನಿಂದ 314 ಕಿ.ಮೀ ದೂರದಲ್ಲಿರುವ ಈ ಪ್ರದೇಶ ಕೈಗಾರಿಕೆ ಸ್ಥಾಪನೆಗೆ ಸೂಕ್ತವಾಗಿದ್ದು. ಅಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಲಾಗಿದೆ,” ಎಂದರು.

ಕೋವಿಡ್‌ ಲಾಕ್‌ಡೌನ್‌ ನಲ್ಲಿಯೂ 31,676.57  ಕೋಟಿರೂ. ಹೂಡಿಕೆ:

ಕರೋನಾ ಲಾಕ್‌ಡೌನ್‌ ಸಂಧರ್ಭದಲ್ಲಿ ರಾಜ್ಯದಲ್ಲಿ 31,676.57 ಕೋಟಿ ರೂಪಾಯಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡಲು ವಿವಿಧ ಕಂಪನಿಗಳು ಮುಂದಾಗಿವೆ. ಇದರಿಂದಾಗಿ  65,459 ಉದ್ಯೋಗ ಸೃಷ್ಟಿಯಾಗಲಿವೆ. ರಾಜ್ಯದಲ್ಲಿ ಹೂಡಿಕೆದಾರರಿಗೆ ಅನುಕೂಲವಾಗುವಂತೆ ತಂದಿರುವ ಹೊಸ ಕೈಗಾರಿಕಾ ನೀತಿ ಹಾಗೂ ಕ್ರಮಗಳಿಂದಾಗಿ ಬಂಡವಾಳ ಹೂಡಿಕೆ ಇಷ್ಟು ಪ್ರಮಾಣದಲ್ಲಿ ಬಂದಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಕ್ಷೇತ್ರದಲ್ಲಿ ಕಳೆದೊಂದು ವರ್ಷದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಕಂಡಿದೆ. ಸೂಕ್ಷ್ಮ, ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಸರಳ ನಿಯಮಗಳ ಕಾನೂನು ಕರ್ನಾಟಕ ರಾಜ್ಯ ಕೈಗಾರಿಕಾ ಸೌಲಭ್ಯಗಳ ಅಧಿನಿಯಮ 2020 ಜಾರಿಗೊಳಿಸಿದ ಪ್ರಥಮ ರಾಜ್ಯ ಎನ್ನುವ ಹೆಗ್ಗಳಿಕೆಯು ನಮ್ಮದು. ಕರ್ನಾಟಕ ರಾಜ್ಯ ಭೂ ಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ, ಭೂ ಪರಿವರ್ತನೆಯ ನಿಯಮಗಳ ಮತ್ತು ಸುಲಲಿತ ವ್ಯವಹಾರದ ಉಪಕ್ರಮಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಾಗಿದೆ,” ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.3200-acres-land-transfer-bgml-industrial-park-minister-jagdish-shetter

 ನಂ.1  ಸ್ಥಾನ ಪಡೆಯುವ ಗುರಿ

“ಕರ್ನಾಟಕ ರಾಜ್ಯವನ್ನು ಕೈಗಾರಿಕೆ ಹಾಗೂ ಹೂಡಿಕೆದಾರರ ಸ್ನೇಹಿ ಸ್ಥಾನದಲ್ಲಿ ದೇಶದಲ್ಲೀ ನಂ.1  ಸ್ಥಾನ ಪಡೆಯುವ ಗುರಿ ನಮ್ಮದು. 2-3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವುದರ ಮೂಲಕ 11 ಕ್ಲಸ್ಟರ್‌ಗಳನ್ನು ಅಭಿವೃದ್ದಿಪಡಿಸುವ ಜತೆಗೆ, ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳನ್ನು ನಿರ್ಮಿಸಲಾಗುವುದು. ಮುಖ್ಯವಾಗಿ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ವೈಜ್ಞಾನಿಕ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕಾಭಿವೃದ್ದಿ ಮಂಡಳಿಯ ವತಿಯಿಂದ ಭೂಸ್ವಾಧೀನ ಪಡಿಸಿಕೊಂಡಿರುವ ಭೂ ಮಾಲೀಕರುಗಳಿಗೆ ಪರಿಹಾರ ನೀಡಲು ಕಾಲಮಿತಿಯ ಮಾರ್ಗಸೂಚಿಯ ರಚನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಲಭ್ಯವಿರುವ ಹಾಗೂ ಕೈಗಾರಿಕೆಗಳಿಗೆ ಉಪಯೋಗಿಸಿಕೊಂಡಿರುವ ಭೂಮಿ ಲೆಕ್ಕಪರಿಶೋಧನ ನಡೆಸಿ, ರಾಜ್ಯದಲ್ಲಿ ಹೂಡಿಕೆದಾರರಿಗೆ ನಮ್ಮಲ್ಲಿ ಲಭ್ಯವಿರುವ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯಿಂದ ಅಭಿವೃದ್ದಿ ಮಾಡಿರುವ ಕೈಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡಲು ಕ್ರಮ ವಹಿಸಲಾಗುತ್ತದೆ,”ಎಂದು ನಂ 1 ಸ್ಥಾನ ಪಡೆಯಲು ರೂಪಿಸಿರುವ ಯೋಜನೆಯನ್ನು ವಿವರಿಸಿದರು.

Key words: 3,200 acres – land- transfer –BGML- Industrial Park-Minister- Jagdish Shetter.