Thursday, August 20, 2026

BDA Apartments

Home Front Page ರಾಜ್ಯದ ವಿವಿಧೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಇನ್ನೂ 4 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಜೂನ್ 13, 2021 (www.justkannada.in): ರಾಜ್ಯದ ವಿವಿಧೆಡೆ ಇನ್ನೂ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ.

ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. tukte-hurricane-effect-heavy-rain