ಬಿಜೆಪಿಯ 40 ಶಾಸಕರು ಕಾಂಗ್ರೆಸ್ ಗೆ ಬರ್ತಾರೆ – ಮಾಜಿ ಶಾಸಕ ರಾಜುಕಾಗೆ.

ಬೆಳಗಾವಿ, ಅಕ್ಟೋಬರ್,3,2021(www.justkannada.in):  ಬಿಜೆಪಿಯ 40 ಶಾಸಕರು ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಎಂದು ಮಾಜಿ ಶಾಸಕ ರಾಜು ಕಾಗೆ  ಹೊಸಬಾಂಬ್ ಸಿಡಿಸಿದ್ದಾರೆ.

ಮಾಧ್ಯಮದ ಜತೆ ಇಂದು ಮಾತನಾಡಿದ ಮಾಜಿ ಶಾಸಕ ರಾಜುಕಾಗೆ,  40 ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಬೆಳಗಾವಿಯ ಪ್ರಭಾವಿನಾಯಕರಿಗೆ ಸಚಿವ ಸ್ಥಾನ ತಪ್ಪಿದೆ. ಹೀಗಾಗಿ ಪ್ರಭಾವಿ ಶಾಸಕರು ಕಾಂಗ್ರೆಸ್ ಗೆ ಬರ್ತಾರೆ. ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಶುರುವಾಗಿದೆ. ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. ಹೀಗಾಗಿ ಅಸಮಧಾನಗೊಂಡಿರುವ 40 ಶಾಸಕರು ಬಿಜೆಪಿಗೆ ಗುಡ್‍ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೆ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಮತ್ತೆ ಅಕಾರಕ್ಕೆ ಬರಲಿದೆ ಎಂದು ರಾಜುಕಾಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: 40 -BJP -MLAs –join- Congress – Former MLA- rajukage