40% ಕಮಿಷನ್ ಆರೋಪ: ದಾಖಲೆ ಸಲ್ಲಿಸುವಂತೆ ಗುತ್ತಿಗೆದಾರ ಸಂಘಕ್ಕೆ ಪ್ರಧಾನಿ ಕಚೇರಿಯಿಂದ ಸೂಚನೆ.

ಬೆಂಗಳೂರು,ಜೂನ್,28,2022(www.justkannada.in):  ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಧ್ಯ ಪ್ರವೇಶಿಸಿದೆ.

ಹೌದು, 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಪ್ರಧಾನಿ ಕಾರ್ಯಾಲಯ ಸೂಚನೆ ನೀಡಿದೆ. ಬೆಂಗಳೂರಿನಲ್ಲಿರುವ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ದಾಖಲೆ ಸಲ್ಲಿಸಲು ಸೂಚಿಸಲಾಗಿದ್ದು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ದಾಖಲೆ ಸಲ್ಲಿಸಲಿದ್ದಾರೆ.

ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿ ಮೋದಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ಸಾಕಷ್ಟು ಸುದ‍್ಧಿಯಾಗಿತ್ತು.

Key words: 40% commission –charge-Prime Minister- Office – Contractor Association -submit -document.