Thursday, August 6, 2026

BDA Apartments

Home Front Page 40 ರಿಂದ 45 ಜನ ನನ್ನ ಸಂಪರ್ಕದಲ್ಲಿದ್ದಾರೆ: ದೆಹಲಿಯವರು ಒಪ್ಪಿದ್ರೆ ಒಂದು ದಿನದ ಕೆಲಸ- ಬಿಎಲ್...

40 ರಿಂದ 45 ಜನ ನನ್ನ ಸಂಪರ್ಕದಲ್ಲಿದ್ದಾರೆ: ದೆಹಲಿಯವರು ಒಪ್ಪಿದ್ರೆ ಒಂದು ದಿನದ ಕೆಲಸ- ಬಿಎಲ್ ಸಂತೋಷ್.

ಬೆಂಗಳೂರು, ಆಗಸ್ಟ್ 31,2023(www.justkannada.in): ಬಿಜೆಪಿಯಿಂದ ಹಲವು ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆಂಬ ಸುದ್ದಿ ಹಿನ್ನೆಲೆ ಈ ಕುರಿತು ಬಿಜೆಪಿ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದಾರೆ.

‘ನಮ್ಮಲ್ಲಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. 10 ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು 40 ರಿಂದ 45 ಜನ ನನ್ನ ಜೊತೆಯೇ ಸಂಪರ್ಕದಲ್ಲಿ ಇದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ನಾಳೆ ಒಂದು ದಿನದ ಕೆಲಸ ಅಷ್ಟೆ. ಆದರೆ ನಮಗೆ ಈಗ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ ಎಂದು ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಬಿಎಲ್ ಸಂತೋಷ್, ಭಾರತೀಯ ಜನತಾ ಪಕ್ಷದಿಂದ ಯಾರೂ ಕಾಂಗ್ರೆಸ್​​ಗೆ ಹೋಗುವುದಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರನ್ನ ಬಾಂಬೆ ಬಾಯ್ಸ್’ ಎಂದು ಕರೆಯಬೇಡಿ. ಅಂದು ನಮ್ಮ ಜೊತೆ ಬಂದವರನ್ನು ನಾವೇ ಹಾಗೆಲ್ಲ ಹೇಳುವುದು ಬೇಡ. ಅವರು ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಹಾಗೆಂದು ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಅಷ್ಟಕ್ಕೂ ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನನಗೆ ಅರಿವಿದೆ. ಪ್ರತಿಪಕ್ಷ ನಾಯಕನ ನೇಮಕ ಆಗಿಲ್ಲ ಅನ್ನುವುದನ್ನೇ ದೊಡ್ಡದು ಮಾಡಿ ಚರ್ಚಿಸುವ ಅಗತ್ಯವೇನು? ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಚರ್ಚೆ ಬಿಟ್ಟು ಸಂಘಟನೆಯಲ್ಲಿ ತೊಡಗಿ ಎಂದು ಅವರು ಪಕ್ಷದ ನಾಯಕರಿಗೆ  ಬಿಎಲ್ ಸಂತೋಷ್ ಸೂಚನೆ ನೀಡಿದರು.

Key words: 40 to 45 people -my contact- One day- work -Delhiites agree- BL Santhosh.