400 ಹೊಸ ವಂದೇ ಭಾರತ್‌ ರೈಲುಗಳು ಆರಂಭ- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್.

ನವದೆಹಲಿ,ಫೆಬ್ರವರಿ,1,2022(www.justkannada.in): ಈ ಬಾರಿಯ ಬಜೆಟ್‌ನಲ್ಲಿ 400 ಹೊಸ ವಂದೇ ಭಾರತ್‌ ರೈಲುಗಳನ್ನು ಘೋಷಿಸಲಾಗಿದೆ.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.  ಕಳೆದ ವರ್ಷ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿಯವರು ಭಾರತದ 75 ನಗರಗಳನ್ನು ಸಂಪರ್ಕಿಸಲು ಹೊಸ ವಂದೇ ಭಾರತ್ ರೈಲುಗಳನ್ನು ಓಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಈ ಬಾರಿಯ ಬಜೆಟ್‌ನಲ್ಲಿ 400 ವಂದೇ ಭಾರತ್‌ ರೈಲುಗಳನ್ನು ಘೋಷಿಸಲಾಗಿದೆ.

ದೇಶದಲ್ಲಿ ಒಟ್ಟು 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳ ಸಂಚಾರ ಆರಂಭವಾಗಲಿದೆ. ಸಮಯಪಾಲನೆ ಮತ್ತು ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು ಈ ರೈಲುಗಳು ಒದಗಿಸುತ್ತವೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ ಈ ರೈಲುಗಳನ್ನು ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯಿಂದ ಹೊಸ ಸೇವೆ. ರೈಲ್ವೆ ನಿಲ್ದಾಣಗಳ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗುತ್ತದೆ.  ರಸ್ತೆ ನಿರ್ಮಾಣಕ್ಕೆ ಪ್ರಮುಖ ಆದ್ಯತೆ. 25 ಸಾವಿರ ಹೆಚ್ಚುವರಿ ಹೂಡಿಕೆ ಮಾಡಲಾಗುತ್ತಿದೆ. 2022ರ ಬಜೆಟ್ ಗೆ 4 ಆಧಾರ ಸ್ತಂಭಗಳು. ವೇಗದ ಸುರಕ್ಷಿತ ಸಾಗಾಣಿಕೆಗೆ ಆದ್ಯತೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Key words: 400 -Vande Bharat- trains-  Union Minister- Nirmala Sitharaman