Sunday, August 23, 2026

BDA Apartments

Home Front Page ಮೈಸೂರು ಸೇರಿ ರಾಜ್ಯದ ಹಲವೆಡೆ 5 ದಿನ ಮಳೆ: ಹವಾಮಾನ ವರದಿ

ಮೈಸೂರು ಸೇರಿ ರಾಜ್ಯದ ಹಲವೆಡೆ 5 ದಿನ ಮಳೆ: ಹವಾಮಾನ ವರದಿ

ಬೆಂಗಳೂರು, ನವೆಂಬರ್ 16, 2020 (www.justkannada.in): ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ 5ದಿನ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದ 15 ಜಿಲ್ಲೆಗಳಲ್ಲಿ 5 ದಿನ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಬಗ್ಗೆ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, , ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆ ಸಂಭವವಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ರಾಜ್ಯದಲ್ಲಿ  ಈಶಾನ್ಯ ಮುಂಗಾರು ಚುರುಕಾಗಿದ್ದು, ಮೋಡ ಕವಿದ ವಾತಾವರಣವಿರಲಿದೆ. ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಬೀಸುತ್ತಿರುವ ತಣ್ಣನೆಯ ಗಾಳಿ ಬೀಸಲಿದೆ. ಮುಂದಿನ 5 ದಿನಗಳ ಕಾಲ ಮಳೆ ಸಾಧ್ಯತೆಗಳಿವೆ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ.