ಇತ್ತೀಚೆಗೆ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ…

ಬೆಂಗಳೂರು,ಮಾರ್ಚ್,11,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಗಂಗಾಧರ ಹೂಗಾರ ಮತ್ತು ನ್ಯೂಸ್1 ಕ್ಯಾಮರಾಮೆನ್  ಸೆಲ್ವರಾಜು (ಚಾಮರಾಜನಗರ) ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.jk

ಸಂಕಷ್ಟದಲ್ಲಿರುವ ಗಂಗಾಧರ ಹೂಗಾರ ಕುಟುಂಬಕ್ಕೆ ನೆರವು ನೀಡುವಂತೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸೆಲ್ವರಾಜು ಅವರ ಕುಟುಂಬಕ್ಕೆ ನೆರವು ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಸಂಘವು, ರಾಜ್ಯ ಸಂಘಕ್ಕೆ ಪತ್ರ ಬರೆದಿದ್ದವು.5-lakhs-family-journalists-death-relief-granted-cm-bs-yeddyurappa

ಈ ಬಗ್ಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಪರಿಹಾರ ಮಂಜೂರು ಮಾಡಿಸಿದ್ದಾರೆ. ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.

Key words: 5 lakhs -family –journalists-death- Relief –granted- CM BS yeddyurappa