5 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ: ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಲ್ಲ…

0
443

ನವದೆಹಲಿ,ಜು,5,2019(www.justkannada.in): ತೆರಿಗೆದಾರರಿಗೆ ಕೇಂದ್ರ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಲಾಗಿದೆ. . 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.  ಹಾಗೆಯೇ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಲ್ಲ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ತೆರಿಗೆ ಪಾವತಿಸುವವರು ಪ್ರಾಮಾಣಿಕ ನಾಗರಿಕರು. ಹೀಗಾಗಿ ಜನರ ಮೇಲೆ ತೆರಿಗೆ ಹೊರೆ ಹೊರಿಸುವುದಿಲ್ಲ. ನೇರ ತೆರಿಗೆ 11 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇನ್ನು 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಜತೆಗೆ  ತೆರಿಗೆ ಪಾವತಿಗೆ ಇನ್ನು ಪ್ಯಾನ್‌ ಕಾರ್ಡ್‌ ಅಥವಾ ಆಧಾರ್‌ ಕಾರ್ಡ್‌ ಇದ್ದರೆ ಸಾಕು . ತೆರಿಗೆ ಪಾವತಿಗೆ ಪ್ಯಾನ್‌ ಕಾರ್ಡ್‌ ಕಡ್ಡಾಯವಲ್ಲ. ಐಟಿ ರಿಟರ್‌ನ್ಸ್‌ ಸಲ್ಲಿಸಲು ಆಧಾರ್‌ ಕಾರ್ಡ್‌ ಸಾಕು ಎಂದು ಹೇಳಿದರು.

ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದವರ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. 7 ಲಕ್ಷದ ವರೆಗಿನ ಗೃಹ ಸಾಲಕ್ಕೆ 15 ವರ್ಷ ತೆರಿಗೆ ವಿನಾಯಿತಿ ನೀಡಲಾಗಿದೆ. 2 ರಿಂದ 5 ಕೋಟಿ ಆದಾಯ ಹೊಂದಿದವರಿಗೆ ಶೇಕಡಾ 3 ರಷ್ಟು ಸರ್‌ಚಾರ್ಜ್‌ 5 ರಿಂದ 10 ಕೋಟಿಗೆ 7 % ಹೆಚ್ಚುವರಿ ತೆರಿಗೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಎಲೆಕ್ಟ್ರಿಕ್‌ ವಾಹನಗಳ ಮೇಲೆ ಜಿಎಸ್‌ಟಿ ಇಳಿಕೆ

ಎಲೆಕ್ಟ್ರೀಕ್‌ ವಾಹನಗಳ ಉತ್ಪಾದನೆಯಲ್ಲಿ ಭಾರತ ಗ್ಲೋಬಲ್‌ ಹಬ್‌ ಆಗಲಿದೆ. ಎಲೆಕ್ಟ್ರಿಕ್‌ ವಾಹನಗಳ ಮೇಲೆ ಜಿಎಸ್‌ಟಿ ಶೇಕಡಾ 12 ರಿಂದ 5 ಕ್ಕೆ ಇಳಿಕೆ ಮಾಡಲಾಗಿದೆ.  ಇನ್ನು ವಾರ್ಷಿಕ 400 ಕೋಟಿ ಆದಾಯ ಹೊಂದಿದ ಉದ್ಯಮಗಳಿಗೆ 25 ಶೇಕಡಾ ತೆರಿಗೆ  ವಿಧಿಸಲಾಗುತ್ತದೆ. 10 ಲಕ್ಷ ಮೌಲ್ಯದ ಎಲೆಕ್ಟ್ರಿಕ್‌ ವಾಹನ ಖರೀದಿಗೆ 1.25 ಲಕ್ಷ ಸಬ್ಸಿಡಿ ನೀಡಲಾಗುತ್ತದೆ ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದರು.

Key words: 5 lakhs- Income- tax –exemption-PAN card -centralbudget