ವೈಯಕ್ತಿಕ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ- ಸಚಿವ ಸತೀಶ್ ಜಾರಕಿಹೊಳಿ.

ಬೆಂಗಳೂರು,ಜನವರಿ,17,2024(www.justkannada.in): ಲೋಕಸಭೆ  ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ಈಗಾಗಲೇ ಸಿಎಂ ಬಗ್ಗೆ ಮಾತನಾಡಿದ್ದೇವೆ. ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಇನ್ನು ಹೆಚ್ಚುವರಿ  ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಕೇವಲ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ENGLISH SUMMARY..

  • Public Works Minister Satish Jarakiholi refuses to respond to personal statements about former MLA Yatindra Siddaramaiah’s statement regarding Siddaramaiah becoming CM for 5 years
  • Minister Jarakiholi stated there was no discussion about creating an additional post of DCM, only about the Lok Sabha elections.

Key words: 5 year-CM- I do –not- respond – personal statements – Minister- Satish Jarakiholi.