ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ.

ರಾಯಚೂರು,ಮೇ,26,2023(www.justkannada.in):  ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ  ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮೇಶ್(5) ಮೃತಪಟ್ಟ ಬಾಲಕ. ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು,   ಇವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದು, ಜಿಲ್ಲೆಯ ಅರಕೇರಾ, ದೇವದುರ್ಗ, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇನ್ನು ಈ ಘಟನೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದಾರೆ.

Key words: 5 year-old boy-dies-drinking –contaminated-water-raichur