Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಹುತಾತ್ಮ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ.

ಹುತಾತ್ಮ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ.

ಬೆಂಗಳೂರು, ಡಿಸೆಂಬರ್ ,5,2023(www.justkannada.in): ಇತ್ತೀಚೆಗೆ  ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಕ್ಯಾ. ಪ್ರಾಂಜಲ್ ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು.

ಕ್ಯಾಪ್ಟನ್ ಪ್ರಾಂಜಲ್  ಅವರ ಕುಟುಂಬದವರಿಗೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದೀಗ ಪರಿಹಾರದ ಚೆಕ್ ಅನ್ನು ಪ್ರಾಂಜಲ್ ಕುಟುಂಬವದವರಿಗೆ ಹಸ್ತಾಂತರಿಸಲಾಗಿದೆ.ಹುತಾತ್ಮ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ pranjal

ಈ ಮಧ್ಯೆ  ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ,ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ. ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದಿದ್ದಾರೆ.

Key words: 50 lakhs – Martyr -K. Pranjal-family -Distribution -compensation.