Tuesday, September 15, 2026

BDA Apartments

Home Front Page 500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿ-ಸಿದ್ಧರಾಮಯ್ಯ ಹೇಳಿಕೆ ವಿಡಿಯೋ ವೈರಲ್: ಟ್ವೀಟ್ ಮೂಲಕ ಬಿಜೆಪಿ ಟಾಂಗ್.

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿ-ಸಿದ್ಧರಾಮಯ್ಯ ಹೇಳಿಕೆ ವಿಡಿಯೋ ವೈರಲ್: ಟ್ವೀಟ್ ಮೂಲಕ ಬಿಜೆಪಿ ಟಾಂಗ್.

ಬೆಳಗಾವಿ,ಮಾರ್ಚ್,2,2023(www.justkannada.in):  ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ  ಪ್ರಚಾರ ಕಾರ್ಯ ಬಿರುಸುಗೊಂಡಿದ್ದು ಈ ಮಧ್ಯೆ ಯಾತ್ರೆಗಳ ಮೂಲಕ ಮತದಾರರನ್ನ ತನ್ನತ್ತ ಸೆಳೆಯಲು ಮುಂದಾಗಿವೆ. ಈ ಮಧ್ಯೆ  ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವೈರಲ್ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್‌ ನಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ ಘಟಕ,  ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು, ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರುವ ಮದುಮಗನ ಥರ ಆಗಿದೆ ಎಂದು ಟಾಂಗ್ ನೀಡಿದೆ.500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿ siddaramaiah asiddaramaiah

ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಿತು . ಈ ವೇಳೆ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರುವ ಬಗ್ಗೆ ಸಿದ್ದರಾಮಯ್ಯ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಟ್ವೀಟ್ ಮಾಡಿದ ವಿಡಿಯೂದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿದಂತೆ ಇತರರಿದ್ದಾರೆ.

Key words: 500 Rs-money- campaign-Siddaramaiah- BJP –tong- tweet.