545 ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ:  ಮರುಪರೀಕ್ಷೆಗೆ ಹೈಕೋರ್ಟ್ ಆದೇಶ.

ಬೆಂಗಳೂರು,ನವೆಂಬರ್,10,2023(www.justkannada.in):  545  ಪಿಎಸ್ ಐ ನೇಮಕಾತಿಯಲ್ಲಿ  ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿದೆ.

ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಮರುಪರೀಕ್ಷೆ ಪ್ರಶ್ನಿಸಿ  ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು,  ಪಿಎಸ್‌ಐ ನೇಮಕಾತಿಯ ಮರು ಪರೀಕ್ಷೆ ನಡೆಸಲು  ಆದೇಶ ಮಾಡಿದೆ. ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆಗೆ ನಡೆಸುವಂತೆ ಸೂಚನೆ ನೀಡಿದರು.

ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 269 ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ರಮ ಎಸಗಿದವರನ್ನು ಪ್ರತ್ಯೇಕಿಸಿ, ಅಕ್ರಮದಲ್ಲಿ ಭಾಗಿಯಾಗಿರದೇ ಇರುವವರನ್ನು ನೇಮಕಾತಿ ಅಂತಿಮಗೊಳಿಸುವಂತೆ ಕೋರಿದ್ದರು.

ಮರು ಪರೀಕ್ಷೆ ವಿರೋಧಿಸಿ 296 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ , ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಆ ಬಳಿಕ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ  ಹೊರಡಿಸಿದೆ.

Key words: 545 PSI recruitment – illegal–High Court-orders –re-examination.