ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 58 ಸಜೀವ ಗುಂಡುಗಳು ನಾಪತ್ತೆ…

ಮೈಸೂರು,ಜೂ,2,2020(www.justkannada.in): ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 58 ಸಜೀವ ಗುಂಡುಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

58 ಸಜೀವ ಗುಂಡುಗಳು ನಾಪತ್ತೆಯಾಗಿದ್ದು ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಠಾಣೆಯ ರೈಟರ್ ಕೃಷ್ಣೇಗೌಡ ಮೇಲೆ ಎಫ್.ಐ.ಆರ್ ದಾಖಲು ಮಾಡಲಾಗಿದೆ ಎಂದು  ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.58 live- bullets – missing- mysore-T. Narasipura- police station

ವಿಚಾರ ತಿಳಿಯುತ್ತಿದ್ದಂತೆ ಟಿ. ನರಸೀಪುರ ಪೊಲೀಸ್ ಠಾಣೆಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರ್ ಲವ ಹಾಗೂ ರೈಟರ್ ಕೃಷ್ಣೇಗೌಡರನ್ನ ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Key words: 58 live- bullets – missing- mysore-T. Narasipura- police station