Sunday, September 27, 2026

BDA Apartments

ನಾಳೆ 6 ನಕ್ಸಲರು ಶರಣಾಗತಿಗೆ ನಿರ್ಧಾರ BDA JK_Adv BDA Adv
Home Front Page ನಾಳೆ 6 ನಕ್ಸಲರು ಶರಣಾಗತಿಗೆ ನಿರ್ಧಾರ

ನಾಳೆ 6 ನಕ್ಸಲರು ಶರಣಾಗತಿಗೆ ನಿರ್ಧಾರ

ಚಿಕ್ಕಮಗಳೂರು,ಜನವರಿ,7,2025 (www.justkannada.in): ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ನಾಳೆ  ಚಿಕ್ಕಮಗಳೂರು ಜಿಲ್ಲಾಡಳಿತದ ಶರಣಾಗತರಾಗಲಿದ್ದಾರೆ. ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದೆ ಎನ್ನಲಾಗಿದೆ.

, ದಕ್ಷಿಣ ಕನ್ನಡದ ಸುಂದರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ತಮಿಳುನಾಡಿನ ಕೆ. ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು ಎಂದು ಹೇಳಲಾಗುತ್ತಿದೆ.

ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಪ್ರಕರಣದ ಬಳಿಕ ಆತನ ಅನುಯಾಯಿಗಳಾಗಿದ್ದ ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ ನೀಡಿತ್ತು. ಅಲ್ಲದೆ ಶರಣಾದ ನಕ್ಸಲರಿಗೆ ಆರ್ಥಿಕ, ಸಾಮಾಜಿಕ ನೆರವು, ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ  ಎನ್ನಲಾಗಿದೆ.

Key words: 6 Naxalites, decide, surrender, tomorrow