Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಮಂಡ್ಯ,ಆಗಸ್ಟ್,20,2026 (www.justkannada.in):  ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೆಆರ್ ಎಸ್ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಖಂಡಿಸಿ ಇಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್  ನಾಗರಾಜ್ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ vatal nagaraj

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೆಆರ್ ಎಸ ನಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿದ್ದೀರಿ. ನೀರು ಹರಿಸಲ್ಲವೆಂದಿ ಹೇಳುತ್ತಿದ್ದೀರಿ. ಆದರೆ 15 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.  ಆಗಸ್ಟ್ 26ರಂದು ಕೆಆರ್ ಎಸ್ ಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ jk02_new jk02 new

ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯ ಪೊಲೀಸರು  ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.

Key words: Cauvery water, Tamilnadu,  KRS , protest, August 26, Vatal Nagaraj