Saturday, September 12, 2026

BDA Apartments

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ BDA JK_Adv BDA Adv
Home Front Page 68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

ಬೆಂಗಳೂರು,ನವೆಂಬರ್,1,2023(www.justkannada.in): ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಆಚರಣೆ ನಡೆಯುತ್ತಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.68ನೇ ಕನ್ನಡ ರಾಜ್ಯೋತ್ಸವ kannada (1) kannada 1

ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ,ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದ್ದು,  ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

Key words: 68th Kannada Rajyotsava -CM Siddaramaiah -hoisting – flag