ಕಲುಷಿತ ನೀರು ಸೇವಿಸಿ 7 ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು.

ಚಾಮರಾಜನಗರ,ಮೇ,27,2024 (www.justkannada.in): ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.  ಕಲುಷಿತ ನೀರು ಸೇವಿಸಿ ಏಳು ಮಂದಿ ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಕಲುಷಿತ ನೀರು ಸೇವಿಸ 7 ಮಂದಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ ಎರಡು ದಿನಗಳಿಂದ ಜನರಿಗೆ ವಾಂತಿಭೇದಿ ಶುರುವಾಗಿದೆ. ಸದ್ಯ ಪೈಪ್‌ ಲೈನ ನೀರಿನ ಪೂರೈಕೆ ಸ್ಥಗಿಗೊಳಿಸಲಾಗಿದ್ದು, ಟ್ಯಾಂಕರ್‌ ಮೂಲಕ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: 7 sick, drinking, contaminated water