ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in): ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ.
ಕಾವೇರಿ ಕ್ರಷರ್ ನಲ್ಲಿ ಬಂಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಬಿಹಾರ ಮತ್ತು ಅಸ್ಸಾಂ ಮೂಲದ 7 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ 5 ಗಂಟೆ ವೇಳೆಗೆ ಕ್ವಾರಿಯಲ್ಲಿ ಕೆಳಗೆ ಕೆಲಸ ಮಾಡುತ್ತಿದ್ದವರ ಮೇಲೆ ಬಂಡೆ ಕುಸಿದು ಈ ಘಟನೆ ನಡೆದಿದೆ. 
ಇನ್ನುಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು ಆರ್ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: 7 workers, die, rock, collapses, quarry






