Saturday, September 19, 2026

BDA Apartments

74ನೇ ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ BDA JK...
Home Front Page 74ನೇ ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ.

74ನೇ ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ.

ನವದೆಹಲಿ,ಜನವರಿ,26,2023(www.justkannada.in): ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಸಂಭ್ರಮ ಕಳೆಗಟ್ಟಿದೆ.

74ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ‘ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಈ ಸಂದರ್ಭವು ಹೆಚ್ಚು ವಿಶೇಷವಾಗಿದೆ. ಏಕೆಂದರೆ, ನಾವು ಇದನ್ನು ಆಜಾದಿ ಕಾ ಅಮೃತ್ ಮಹೋತ್ಸವದ ಸಮಯದಲ್ಲಿ ಆಚರಿಸುತ್ತಿದ್ದೇವೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಬೇಕೆಂದು ನಾನು ಬಯಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿ ಶುಭಕೋರಿದ್ದಾರೆ.

Key words: 74th Republic Day- PM Modi – Amar Jawan Jyoti