75ನೇ ಸ್ವಾತಂತ್ರ್ಯೋತ್ಸವ: ಸಿದ್ಧರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ.

ಬೆಂಗಳೂರು,ಆಗಸ್ಟ್,15,2022(www.justkannada.in): 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್  ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ ನಡೆಸುತ್ತಿದ್ದು ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು ಸಂಗೊಳ್ಳಿ ರಾಯಣ್ಣ ವೃತ್ತದಿಂದ  ಸ್ವಾತಂತ್ರ್ಯ ನಡಿಗೆ ಪ್ರಾರಂಭವಾಗಿದೆ. ಕೆಆರ್ ವೃತ್ತ ಹಡ್ಸನ್ ಸರ್ಕಲ್ ವಿವಿಪುರಂ ಮಾರ್ಗವಾಗಿ  ನ್ಯಾಷನಲ್ ಕಾಲೇಜು ಮೈದಾನಕ್ಕೆ ಪಾದಯಾತ್ರೆ ತಲುಪಲಿದ್ದು ನಂತರ ಬೃಹತ್ ಸಮಾವೇಶ ನಡೆಯಲಿದೆ.

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ನ ಹಲವು ನಾಯಕರು, ವಿವಿಧ ಜಿಲ್ಲೆಗಳಿಂದ ಆಗಮಿಸಿರುವ  ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ರಾಷ್ಟ್ರ ಧ್ವಜ ಹಿಡಿದು ಸಾಗಿದ್ದಾರೆ.

Key words: 75th Independence Day- Congress- Independence day