ಸಿಎಂ ಬಿಎಸ್ ಯಡಿಯೂರಪ್ಪಗೆ 78ನೇ ಹುಟ್ಟುಹಬ್ಬದ ಸಂಭ್ರಮ: ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ…

ಬೆಂಗಳೂರು,ಫೆ,27,2020(www.justkannada.in):  ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ 78ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆ ಸಿಎಂ ಬಿಎಸ್ ವೈ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ಶುಭ ಕೋರಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ರೈತರ ಅಭಿವೃದ್ದಿಗೆ ಹಳ್ಳಿಗಳ ಅಭಿವೃದ್ದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಅವರು ಹೆಚ್ಚು ವರ್ಷಗಳ ಕಾಲ ಬದುಕಲಿ. ದೇವರು  ಬಿಎಸ್ ವೈ ಅವರಿಗೆ ಒಳ್ಳೆಯ ಆರೋಗ್ಯ ನೀಡಲಿ ಎಂದು ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ.

Key words: 78th Birthday -Celebration -CM BS Yeddyurappa-Prime Minister -Narendra Modi.