Wednesday, August 12, 2026

BDA Apartments

Home Front Page ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ.

ದಾವಣಗೆರೆ, ನವೆಂಬರ್ 9,2022(www.justkannada.in):  ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಫೋಷಿಸಿದ್ದಾರೆ.

ಸಾಕಷ್ಟು ದಿನಗಳಿಂದ ಸರ್ಕಾರಿ ನೌಕರರಿಂದ ಒತ್ತಾಯ ಕೇಳಿ ಬಂದಿತ್ತು.  ಇದರಂತೆ ವೇತನ ಪರಿಷ್ಕರಣೆ ಹಾಗೂ ಸೌಲಭ್ಯಗಳ ವಿಸ್ತರಣೆಗೆ 7ನೇ ವೇತನ ಆಯೋಗ ರಚಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Key words: 7th– Pay -Commission -constituted – Chairmanship – Sudhakar Rao-CM Bommai