ಫೆ.25ರಂದು ಯುವರಾಜ ಕಾಲೇಜಿನ 8ನೇ ಪದವಿ ಪ್ರದಾನ ಸಮಾರಂಭ .

ಮೈಸೂರು.ಫೆಬ್ರವರಿ18,2022(www.justkannada.in):  ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಯುವರಾಜ ಕಾಲೇಜಿನ (ಸ್ವಾಯತ್ತ) 8ನೇ ಪದವಿ ಪ್ರದಾನ ಸಮಾರಂಭವನ್ನು ಫೆಬ್ರವರಿ 25 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಯಾಗಿ ನಾಗಮಂಗಲದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಎಸ್. ಚಂದ್ರಶೇಖರ ಶೆಟ್ಟಿ ಭಾಗವಹಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ದತ್ತಿ ಬಹುಮಾನ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಿದ್ದಾರೆ.

ಪದವಿ ಪಡೆಯುವ ವಿದ್ಯಾರ್ಥಿಗಳು ಬಿಳಿಯ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಬೆಳಗ್ಗೆ 9.30ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಪಾಲ್ಗೊಳ್ಳುವಿಕೆಯ ದೃಢೀಕರಣವನ್ನು ಕಡ್ಡಾಯವಾಗಿ ಪರೀಕ್ಷಾ ನಿಯಂತ್ರಣಾಧಿಕಾರಿಗಳು, ಯುವರಾಜ ಕಾಲೇಜು, ಮೈಸೂರು ವಿಶ್ವವಿದ್ಯಾಲಯ ಇವರಲ್ಲಿ ನೇರವಾಗಿ ಅಥವಾ ಇ-ಮೇಲ್ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಪರೀಕ್ಷಾ ನಿಯಂತ್ರಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 0821-2419163 ಸಂಪರ್ಕಿಸಿ.

Key words: 8th Graduation- Ceremony – mysore-Yuvaraja College