Friday, August 14, 2026

BDA Apartments

Home Crime ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 9 ಕೆಜಿ ಚಿನ್ನ ವಶಕ್ಕೆ: ಇಬ್ಬರ ಬಂಧನ

ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಬರೊಬ್ಬರಿ 9 ಕೆಜಿ ಚಿನ್ನ ವಶಕ್ಕೆ: ಇಬ್ಬರ ಬಂಧನ

ಚಿಕ್ಕಮಗಳೂರು,ಮಾರ್ಚ್,23,2023(www.justkannada.in): ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ (Tarikere) ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು  ಹಾಗೂ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ.

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ.  ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Key words: 9 kg – gold – seized – pick-up vehicle-chikkamagalore