Tuesday, September 22, 2026

BDA Apartments

ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ BDA JK_Adv BDA Adv
Home Crime ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ. 

ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ: ನಾಲ್ವರು ಪರಾರಿ. 

ಮೈಸೂರು,ನವೆಂಬರ್,26,2022(www.justkannada.in): ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ arrest arrest 7

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು‌ ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ  ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ  ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.

Key words: Two -arrested – illegal -deer –hunting-forest department-HD Kote