Sunday, September 13, 2026

BDA Apartments

ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಸೇರಿ ಕೆಲಸ ಮಾಡುತ್ತೇವೆ- ಜಗದೀಶ್ ಶೆಟ್ಟರ್ ವಿ...
Home Front Page ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಸೇರಿ ಕೆಲಸ ಮಾಡುತ್ತೇವೆ- ಜಗದೀಶ್ ಶೆಟ್ಟರ್ ವಿಶ್ವಾಸ….

ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಸೇರಿ ಕೆಲಸ ಮಾಡುತ್ತೇವೆ- ಜಗದೀಶ್ ಶೆಟ್ಟರ್ ವಿಶ್ವಾಸ….

ಬೆಂಗಳೂರು,ಆ,20,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗುತ್ತಿದ್ದು ಇಂದು 17 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಶಾಸಕ ಜಗದೀಶ್ ಶೆಟ್ಟರ್ ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸುತ್ತೇನೆ ಎಂದಿದ್ದಾರೆ.

ರಾಜಭವನದಲ್ಲಿ 17 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು ಅದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಜಗದೀಶ್ ಶೆಟ್ಟರ್ , ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಜನರು ಮನೆ ಆಸ್ತಿ ಎಲ್ಲವನ್ನ ಕಳೆದುಕೊಂಡಿದ್ದಾರೆ. ಹೀಗಾಗಿ ನೆರೆ ಪರಿಸ್ಥಿತಿ ನಿರ್ವಹಣೆ ಮತ್ತು ಪರಿಹಾರ ಕೊಡಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಅವಧಿಯಲ್ಲಿ  ಎಲ್ಲಾ ಜಿಲ್ಲೆಗಳಿಗೂ ಆದ್ಯತೆ ಕೊಡುತ್ತೇವೆ ಎಂದರು.

ಇನ್ನು ಸಚಿವ ಸ್ಥಾನ ಪಡೆದಿರುವ ಮತ್ತೊಬ್ಬ ಶಾಸಕ ಕೆ.ಎಸ್ ಈಶ್ವರಪ್ಪ ಮಾತನಾಡಿ, ರಾಜ್ಯದ ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಮ್ಮ ಹಿರಿಯರು ಕೊಟ್ಟ ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: We will- work- together – development – state-Jagdish Shetter- Confidence