ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನೆಡೆ: ಸಿಎಂ ಸ್ಥಾನಕ್ಕೆ ಜೈರಾಮ್ ಠಾಕೂರ್‌ ರಾಜೀನಾಮೆ.

ಹಿಮಾಚಲ ಪ್ರದೇಶ ,ಡಿಸೆಂಬರ್,8,2022(www.justkannada.in):  ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು,  ಆಡಳಿತರೂಢ ಬಿಜೆಪಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆಯಲ್ಲಿ  ಜೈರಾಮ್ ಠಾಕೂರ್‌   ಸಿಎಂ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯಪಾಲರಿಗೆ ಸಿಎಂ ಜೈರಾಮ್ ಠಾಕೂರ್‌  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಹೇಳಿದ್ದಾರೆ.

ನಾನು ಜನಾದೇಶವನ್ನು ಗೌರವಿಸುತ್ತೇನೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ  ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ವರಿಷ್ಠರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅಭಿವೃದ್ಧಿ ಕಾರ್ಯವನ್ನು ಮುಂದುವರೆಸುತ್ತೇನೆ ಎಂದು ಜೈರಾಮ್ ಠಾಕೂರ್ ತಿಳಿಸಿದ್ದಾರೆ.

Key words: BJP –lose-Himachal Pradesh- Jairam Thakur- resigns – CM.