Tuesday, September 15, 2026

BDA Apartments

ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ- ಕೆಪಿಸಿಸಿ ಕಾರ್ಯಾ...
Home Front Page ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಬೆಳಗಾವಿ.ಡಿಸೆಂಬರ್,9,2022(www.justkannada.in):  ಕಾಂಗ್ರೆಸ್ ನಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ರೂ ಟಿಕೆಟ್ ನೀಡುತ್ತಾರೆ. ಸೀನಿಯರ್​ ಅಂತಾ ಟಿಕೆಟ್ ನೀಡುತ್ತೇವೆ. ಇನ್ಮುಂದೆ ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಗುಜರಾತ್ ನಲ್ಲಿ ಬಿಜೆಪಿ ಗೆಲುವಿನ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,  ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ. ಆಮ್​ ಪಡೆದಿರುವ 13% ಮತಗಳು ಕಾಂಗ್ರೆಸ್ ​ನದ್ದು. ಇದರಿಂದಾಗಿ ಪಕ್ಷಕ್ಕೆ ನೇರವಾಗಿ ನಮಗೆ ಹೊಡೆತ ಬಿದ್ದಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಪಕ್ಷ 60-70 ಕ್ಷೇತ್ರಗಳಲ್ಲಿ ಗೆಲ್ಲಬೇಕಿತ್ತು ಎಂದರು.ಗೆಲ್ಲುವ ಹಾಗೆ ಇದ್ದರೆ ಮಾತ್ರ ಹಿರಿಯರಿಗೆ ಟಿಕೆಟ್ ನೀಡಲಿ sathish

ಇನ್ನು ಗುಜರಾತ್ ಬಿಜೆಪಿ​​ ಮಾದರಿ ಮೆಚ್ಚಿದ ಸತೀಶ್ ಜಾರಕಿಹೊಳಿ, ಅದೇ​ ರೀತಿಯಲ್ಲೇ ರಾಜ್ಯ ಕಾಂಗ್ರೆಸ್​ನಲ್ಲಿ ಟಿಕೆಟ್ ಹಂಚಬೇಕು. ಸ್ಟ್ರ್ಯಾಟಜಿ ಮಾಡದೆ ರಾಜ್ಯದಲ್ಲಿ ನಾವು ಚುನಾವಣೆ ಗೆಲ್ಲಲು ಆಗಲ್ಲ. ಗುಜರಾತ್​ ಚುನಾವಣೆಯಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್ ನೀಡಿದೆ. ಹಿಂದಿನ 3 ಚುನಾವಣೆಗಳಲ್ಲಿ 30-40 ಹೊಸಬರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಆದರೆ ನಮ್ಮಲ್ಲಿ ಸೋಲುತ್ತಾರೆ ಎಂದು ಗೊತ್ತಿದ್ರೂ ಟಿಕೆಟ್ ನೀಡುತ್ತಾರೆ. ಜಾತಿ ಯುಗ ಮುಗಿದಿದೆ, ಕೆಲಸ ಮಾಡುವುದನ್ನು ಜನ ನೋಡ್ತಾರೆ. ರಾಜ್ಯ ಕಾಂಗ್ರೆಸ್​​​​ ಪಕ್ಷದಲ್ಲಿ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು  ಹೇಳಿದರು.

Key words: seniors – given -tickets -only – win – KPCC -working president- Sathish Jarakiholi.