Saturday, August 1, 2026

BDA Apartments

Home Front Page ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಇಂದು ಪ್ರಮಾಣ ವಚನ ಸ್ವೀಕಾರ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಇಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಡಿಸೆಂಬರ್ 11, 2022 (www.justkannada.in): ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್ ಸುಖು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುಖವಿಂದರ್ ಸಿಂಗ್ ಸುಖು ಜತೆಗೆ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಕೂಡ ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಮಧ್ಯಾಹ್ನ 1.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಮಾನ್ಯ ಕುಟುಂಬದವರಾದರೂ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗುತ್ತಿರುವುದು ಸಂತಸ ತಂದಿದೆ ಎಂದು  ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿರುವ ಸುಖು ಅವರು ರಾಜ್ಯದ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾಗಿದ್ದಾರೆ. NSUI ಮತ್ತು ಯೂತ್ ಕಾಂಗ್ರೆಸ್‌ನ ಭಾಗವಾಗಿದ್ದಾರೆ. ಸುಖು 2003 ರಲ್ಲಿ ನಾದೌನ್‌ನಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.